ಪಂಜಾಬ್ ವಿರುದ್ಧ 3 ವಿಕೆಟ್ ಜಯ ಸಾಧಿಸಿರುವ ಗುಜರಾತ್ ತಂಡವು 6ನೇ ಸ್ಥಾನಕ್ಕೆ ಜಿಗಿದಿದೆ.
ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ತೋರಿದ ಗುಜರಾತ್ ಟೈಟಾನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್ಗಳ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿ ಪಂಜಾಬ್ 20 ಓವರ್ಗಳಲ್ಲಿ 142 ರನ್ಗಳಿಗೆ ಆಲೌಟ್ ಆಯ್ತು. ಸುಲಭ ಸವಾಲನ್ನು ಬೆನ್ನಟ್ಟಿದ ಗುಜರಾತ್ 19.1 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಹೊಡೆದು ಜಯಗಳಿಸಿತು
ಈ ಪಂದ್ಯವನ್ನು ಗೆಲ್ಲುವ ಮೂಲಕ 8ನೇ ಸ್ಥಾನದಲ್ಲಿದ್ದ ಗುಜರಾತ್ 6ನೇ ಸ್ಥಾನಕ್ಕೆ ಜಿಗಿದಿದೆ.
ಗುಜರಾತ್ ಪರ ನಾಯಕ ಶುಭಮನ್ ಗಿಲ್ 35 ರನ್ (29 ಎಸೆತ, 5 ಬೌಂಡರಿ), ಸಾಯಿ ಸುದರ್ಶನ್ 31 ರನ್(34 ಎಸೆತ, 3 ಬೌಂಡರಿ) ಕೊನೆಯಲ್ಲಿ ರಾಹುಲ್ ತೆವಾಟಿಯ ಔಟಾಗದೇ 36 ರನ್(18 ಎಸೆತ, 7 ಬೌಂಡರಿ) ಹೊಡೆದು ತಂಡಕ್ಕೆ ಜಯ ತಂದುಕೊಟ್ಟರು. ಪಂಜಾಬ್ ಪರ ಹರ್ಷಲ್ ಪಟೇಲ್ 3 ವಿಕೆಟ್, ಲಿವಿಂಗ್ಸ್ಟೋನ್ 2 ವಿಕೆಟ್ ಕಿತ್ತರು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಉತ್ತಮ ಆರಂಭ ಪಡೆದಿತ್ತು. ಮೊದಲ ವಿಕೆಟಿಗೆ 52 ರನ್ ಜೊತೆಯಾಟ ಬಂದಿತ್ತು. ನಂತರ ನಿರಂತರ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು
ಪಂಜಬ್ ಪರ ಪ್ರಭ್ಸಿಮ್ರಾನ್ ಸಿಂಗ್ 35 ರನ್ ( 21 ಎಸೆತ, 3 ಬೌಂಡರಿ, 3 ಸಿಕ್ಸರ್), ಹರ್ಪ್ರೀತ್ ಬ್ರಾರ್ 29 ರನ್ (12 ಎಸೆತ, 4 ಬೌಂಡರಿ, 1 ಸಿಕ್ಸರ್) ಸಿಡಿಸಿದ ಪರಿಣಾಮ ತಂಡದ ಮೊತ್ತ 140 ರನ್ಗಳ ಗಡಿ ದಾಟಿತು. ಗುಜರಾತಿನ ಸಾಯ್ ಕಿಶೋರ್ 4 ವಿಕೆಟ್ ಕಿತ್ತರೆ ನೂರ್ ಅಹ್ಮದ್ ಮತ್ತು ಮೋಹಿತ್ ಶರ್ಮಾ ತಲಾ 2 ವಿಕೆಟ್ ಪಡೆದರು.