ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಕಾರಣ ಸಿಎಸ್ಕೆ ತಂಡದ ನೆಟ್ ರನ್ ರೇಟ್ +1.979 ಕ್ಕೇರಿದೆ.
ಇನ್ನು ಆಡಿರುವ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 20 ರನ್ಗಳಿಂದ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 2 ಪಾಯಿಂಟ್ಸ್ನೊಂದಿಗೆ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆರ್ಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +1.000.
ಹಾಗೆಯೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ರನ್ಗಳಿಂದ ರೋಚಕ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಕೆಕೆಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.200
ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್ಗಳಿಂದ ಗೆದ್ದು ಬೀಗಿದ್ದ ಪಂಜಾಬ್ ಕಿಂಗ್ಸ್ ತಂಡವು 2ನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ 4 ವಿಕೆಟ್ಗಳಿಂದ ಸೋಲನುಭವಿಸಿತ್ತು. ಇದಾಗ್ಯೂ 2 ಅಂಕಗಳೊಂದಿಗೆ +0.025 ನೆಟ್ ರನ್ ರೇಟ್ ಹೊಂದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ಗಳಿಂದ ಸೋಲನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡಿದೆ. ಈ ಗೆಲುವಿನೊಂದಿಗೆ ಒಟ್ಟು 2 ಅಂಕ ಪಡೆದಿರುವ ಫಾಫ್ ಪಡೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.180.
ಹಾಗೆಯೇ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ಗುಜರಾತ್ ಟೈಟಾನ್ಸ್ ತಂಡವು 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನುಭವಿಸಿದೆ. ಈ ಗೆಲುವು-ಸೋಲುಗಳೊಂದಿಗೆ 2 ಅಂಕ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡವು -1.425 ನೆಟ್ ರನ್ ರೇಟ್ನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 6ನೇ ಸ್ಥಾನದಲ್ಲಿದೆ.
ಇನ್ನು ಮೊದಲ ಪಂದ್ಯದಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 7,8,9 ಮತ್ತು 10ನೇ ಸ್ಥಾನಗಳನ್ನು ಅಲಂಕರಿಸಿದೆ