ಖ್ಯಾತ ನಟಿ ಹಾಗೂ ರಾಜಕಾರಣಿ ಖುಷ್ಬೂ ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿಯ ಮದುವೆ ಮತ್ತು ಮತಾಂತರ ಕುರಿತಾಗಿ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ಈ ಬಗ್ಗೆ ಖುಷ್ಬೂ ಉತ್ತರಿಸಿದ್ದಾರೆ.
ಮುಂಬೈನ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದ ಖುಷ್ಬೂ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಂತರ ದಕ್ಷಿಣ ಭಾರತದಲ್ಲಿ ನೆಲೆಯೂರಿದರು. ಹೆಚ್ಚೆಚ್ಚು ಸಿನಿಮಾಗಳು ಸಿಕ್ಕಾಗ ಚೆನ್ನೈನಲ್ಲೇ ಮನೆ ಮಾಡಿಕೊಂಡು ನಿರ್ದೇಶಕ ಸುಂದರ್. ಸಿ ಅವರನ್ನು ವಿವಾಹವಾದರು. ಈ ವಿವಾಹದ ಕುರಿತಾಗಿಯೇ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ನೀವು ಹಿಂದೂ ವ್ಯಕ್ತಿಯನ್ನು ಮದುವೆ ಆಗಿದ್ದೀರಿ. ಹಾಗಾಗಿ ಮತಾಂತರ ಆಗಿದ್ದೀರಾ? ಎನ್ನುವ ಪ್ರಶ್ನೆಯನ್ನು ನಟಿಗೆ ಕೇಳಿದ್ದಾರೆ.
ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಪ್ರಶ್ನೆ ಅವರಿಗೆ ಎದುರಾಗಿದೆ. ಇದಕ್ಕೆ ಉತ್ತರಿಸಿದ ಖುಷ್ಭೂ ನಾನು ಮತಾಂತರ ಆಗಿಲ್ಲ. ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದೆ. ಈ ಕಾಯ್ದೆ ಬಗ್ಗೆ ತಿಳಿದುಕೊಳ್ಳಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಯಾವುದೇ ಧರ್ಮಕ್ಕೆ ಮತಾಂತರ ಆಗಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.