ಮಂಗಳವಾರ ತಡರಾತ್ರಿ ಮಧ್ಯ ಇಸ್ರೇಲ್ನ ಟೆಲ್ ಅವಿವ್ನ ಜಾಫಾ ಪಟ್ಟಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಕೋರರು ಮನ ಬಂದಂತೆ ಗುಂಡಿನ ದಾಳಿಸಿದ್ದು ಈ ವೇಳೆ ಭದ್ರತಾ ಸಿಬ್ಬಂದಿ ಇಬ್ಬರು ದುಷ್ಕರ್ಮಿಗಳನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಇಬ್ಬರು ವೆಸ್ಟ್ಬ್ಯಾಂಕ್ನ ಹೆಬ್ರಾನ್ನಿಂದ ಆಗಮಿಸಿದ್ದರು ರಂದು ರಕ್ಷಣಾ ಪಡೆ ತಿಳಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 8 ಮಂದಿ ಮೃತಪಟ್ಟಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಟ್ರಾಫಿಕ್ ಕ್ರಾಸಿಂಗ್ ಬಳಿ ಗುಂಡಿನ ದಾಳಿ ನಡೆದ ನಂತರ ಹೆಚ್ಚಿನ ಸಾವುನೋವುಗಳು ಸಂಭವಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ನಿಲ್ದಾಣದಲ್ಲಿ ಇಬ್ಬರು ಮನಬಂದಂತೆ ಗುಂಡು ಹಾರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.