ವಿಜಯಪುರ: ನಮ್ಮ ಪಕ್ಷಕ್ಕೆ ಯಾವುದೇ ಅರ್ಜಿ ಹಾಕಿಲ್ಲ. ಹಾಕಿದರು ಕೂಡ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಇದೆ. ಅವರು ಒಂದು ಸಮಾಜದ ವಿರುದ್ಧ ಬಹಳಷ್ಟು ಮಾತನಾಡಿದ್ದಾರೆ. ಈ ಕಾರಣ ನಮ್ಮಲ್ಲಿ ಅವರನ್ನ ಸೇರಿಸಿಕೊಳ್ಳುವುದು ಕಷ್ಟ
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಯತ್ನಾಳ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ವಿಜಯಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ.
ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ
