ಬೆಂಗಳೂರು: ತಾನು ಜನರಿಗೆ ನೀಡಿದ ಗ್ಯಾರಂಟಿಗಳಿಗೆ ಇದೀಗ ಷರತ್ತು ವಿಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ,(Ashwatthanarayan) ಎಲ್ಲರಿಗೂ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಈಗ ಕೊಟ್ಟ ಭರವಸೆಗಳಿಗೆ ಷರತ್ತು ಅನ್ವಯ ಅಂತ ಹೇಳುತ್ತಿದ್ದಾರೆ.
ಜನರಿಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಬೇಕು ಎಂದು ಆಗ್ರಹಿಸಿದರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದ್ದಾರೆ. 200 ಯುನಿಟ್ ಕರೆಂಟ್ ಫ್ರೀ, 2000 ರೂ. ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ದು ಎಲ್ಲರಿಗೂ ಕೊಡಲಿ. ಎಂದರು. ಹಳ್ಳಿಗಳಲ್ಲಿ ಕರೆಂಟ್ ಬಿಲ್ ಕಟ್ಟಲು ನಿರಾಕರಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಹೇಳಿರುವುದನ್ನು ಜನ ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಬಿಲ್ ಕಟ್ಟುವಂತಿಲ್ಲ ಅಂತ ಹೇಳಿದ್ದರು, ಅದಕ್ಕೆ ಕಟ್ಟುತ್ತಿಲ್ಲ. ನಾವು ಇದನ್ನು ಅಸ್ತ್ರ ಮಾಡಿಕೊಂಡಿಲ್ಲ ಎಂದರು.