ಬೆಂಗಳೂರು: ಬೆಸ್ಕಾಂನವರು ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ರಾಮನಗರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಅಧಿಕಾರಿಗಳು ಪ್ರಚಾರ ಮಾಡಿ ನೋಂದಣಿ ಮಾಡಿಸಬೇಕು.
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಬಿಜೆಪಿ ಸರ್ಕಾರ. ಬಿಜೆಪಿಯವರು ತಿಂದು ನಮ್ಮ ಮೂತಿಗೆ ಒರಿಸುವ ಯತ್ನ ಮಾಡಿದ್ದಾರೆ ಎಂದರು.
ಕಳೆದ ಮೂರು ವರ್ಷಗಳಿಂದ ಅನೇಕ ಪಾದಯಾತ್ರೆಗಳಲ್ಲಿ ಪಾಲ್ಗೊಂಡಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇವೆ.
ಡ್ರಗ್ಸ್ ಸೇವನೆ ಮಾಡಿದರೆ ನೋವು, ಸಾವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆ ಇರಬೇಕು.
ನೀವು ಸಾಮಾಜಿಕ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನೀವು ನಿಮ್ಮ, ನಿಮ್ಮ ಸ್ನೇಹಿತರು ಆತ್ಮೀಯರು, ಸಮಾಜ ಆರೋಗ್ಯಕರ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ. ನಿಮಗೆ ಅಭಿನಂದನೆಗಳು.