ಕಲಬುರಗಿ: ಕಾಂಗ್ರೆಸ್ ಮುಖಂಡರ ಮೇಲೆ ಮತ್ತೆ ಐಟಿ ದಾಳಿ ಮುಂದುವರೆಸಿದೆ. ಇತ್ತೀಚಿಗಷ್ಟೇ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತರ ಮೇಲೆ ದಾಳಿ ನಡೆಸಿದ್ದ ಐಟಿ, ಸದ್ಯ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಅವರ ಆಪ್ತ ಹಾಗೂ ಜಿಪಂನ ಮಾಜಿ ಸದಸ್ಯ ಅರವಿಂದ್ ಚವ್ಹಾಣ್ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ.
ಮನೆ, ಜಲ್ಲಿ ಕ್ರಷರ್ ಮತ್ತು ಹೋಟೆಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆ ದಾಳಿ ನಡೆಸಿದ್ದ ಅಧಿಕಾರಿಗಲು ರಾತ್ರಿ 11ರ ವರೆಗೆ ಪರಿಶೀಲನೆ ನಡೆಸಿದ್ದಾರೆ. ಅರವಿಂದ್ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದರು.
ಅಲ್ಲದೇ, ಹಾವೇರಿಯ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜಿಲ್ಲೆಯ ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.