ಬೆಂಗಳೂರು: ನನ್ನ ನಿರೀಕ್ಷೆ ಹುಸಿಯಾಗಿದೆ, ಮಾಧ್ಯಮಗಳ ನಿರೀಕ್ಷೆ ನಿಜವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿ(HD Kumaraswamy) ಹೇಳಿದರು. ಈ ಸಂಬಂಧ ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಚುನಾವಣಾ ಸೋಲಿನ ಪರಾಮರ್ಶೆ ವಿಚಾರಕ್ಕೆ ಸಂಬಂಧಿಸಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ನಿಲ್ತೇವೆ. ನಾನು ಕಳೆದ 6 ತಿಂಗಳಿಂದ ಶ್ರಮಪಟ್ಟು ಕೆಲಸ ಮಾಡಿದ್ದೆ.
ಪಂಚರತ್ನ ಯೋಜನೆಗಳು ಜನರಗೆ ಇಡಿಸಲಿಲ್ಲ ಅನ್ಸುತ್ತೆ. ಕಾಂಗ್ರೆಸ್ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನೊದರ ಬಗ್ಗೆ ಮಾಹಿತಿ ಕಲೆ ಹಾಕ್ತೇನೆ. ಈ ರೀತಿಯ ಫಲಿತಾಂಶ ನಮ್ಮ ಪಕ್ಷಕ್ಕೆ ಹೊಸದೇನಲ್ಲ. ದೇವೇಗೌಡರು ಎರಡು ಬಾರಿ ಸೋತ ಬಳಿಕವೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿತ್ತು. ಜನ ಮುಂದಿನ ದಿನಗಳಲ್ಲಿ ಮತ್ತೆ ಜೆಡಿಎಸ್ ಬೇಕು ಅಂತ ಬಯಸ್ತಾರೆ ಎಂದು ಹೆಚ್ಡಿ ಕುಮಾರಸ್ವಾಮಿ ತಿಳಿಸಿದರು.