ಹುಬ್ಬಳ್ಳಿ:- ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ, ಅದಕ್ಕೆ ಒಂದು ಸಮಿತಿ ಇದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ವಿಚಾರವಾಗಿ ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ.
ಆದರೆ ಈ ಮೆಟ್ರೋ ದರ ಏರಿಕೆ ವಿಚಾರದಲ್ಲಿ ಎಲ್ಲ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದರು.
