ಬೆಂಗಳೂರು:- ಇಂದು ರಾಜ್ಯದ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿಯಲ್ಲಿ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ರಾಯಚೂರು ಮತ್ತು ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಕನ್ನಡ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ