ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 2023-24ರ ಋತುವಿನ (ಅಕ್ಟೋಬರ್ 1, 2023 ರಿಂದ ಸೆಪ್ಟೆಂಬರ್ 30, 2024 ರವರೆಗೆ) ಟೀಂ ಇಂಡಿಯಾದ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಪ್ರಕಟ ಮಾಡಿದೆ.
ನಿರೀಕ್ಷೆಯಂತೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (Virat Kohli), ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅವರನ್ನ ಎ+ ವರ್ಗದಲ್ಲಿ ಇರಿಸಲಾಗಿದೆ. ಆದ್ರೆ ಬಿಸಿಸಿಐನ ಕೇಂದ್ರ ಗುತ್ತಿಗೆಯಲ್ಲಿರುವ ಆಟಗಾರರು ಐಪಿಎಲ್ಗಿಂತ ರಣಜಿ ಟ್ರೋಫಿಯನ್ನೇ ಮುಖ್ಯವಾಗಿ ಆಡಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರ ಸೂಚನೆಯನ್ನು ನಿರ್ಲಕ್ಷ್ಯ ಮಾಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಇಶಾನ್, ಕಿಶನ್ ಅವರಿಗೆ ಕೊಕ್ ನೀಡಿದೆ.
ಸಕ್ತ ವರ್ಷದಿಂದಲೇ ಟಿ20 ವಿಶ್ವಕಪ್ (T20 World Cup) ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ಸಾಮರ್ಥ್ಯ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ಮಣೆ ಹಾಕಿದೆ. ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ಜಿತೇಶ್ ಶರ್ಮಾ, ಮುಕೇಶ್ ಕುಮಾರ್ ಅವರನ್ನು ಸಿ-ವರ್ಗಕ್ಕೆ ಸೇರಿಸಲಾಗಿದೆ. ಇದರೊಂದಿಗೆ ಕಳೆದ ವರ್ಷ ಏಷ್ಯಾಕಪ್, ಏಕದಿನ ವಿಶ್ವಕಪ್ ಟೂರ್ನಿ ಆಯ್ಕೆಯಿಂದ ವಂಚಿರಾದ ಸಂಜು ಸ್ಯಾಮ್ಸನ್ ಅವರನ್ನೂ ಸಿ ವರ್ಗಕ್ಕೆ ಸೇರಿಸಲಾಗಿದೆ