ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಭೇಟಿಯಾಗಿರುವ ಇಬ್ಬರೂ ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನೆಡೆ ಆಗದಂತೆ ತಡೆಯಲು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸೆಳೆಯಲು ಯತ್ನ ನಡೆದಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದ ಆಪರೇಷನ್ ಹಸ್ತಕ್ಕೆ ರಿವರ್ಸ್ ಆಪರೇಷನ್ ನಡೆದಿರುವ ಸುಳಿವು ಸಿಕ್ಕಿದೆ.