ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೋಕ್ಸೋ (Pocso Case) ಕಾಯ್ದೆ ಅಡಿ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ (MurughaShri) ಜಾಮೀನು (Bail) ಅರ್ಜಿ ವಿಚಾರಣೆಯ ಆದೇಶವನ್ನು ಹೈಕೋರ್ಟ್ (High Court) ಇಂದು ಪ್ರಕಟಿಸಲಿದೆ. ಈ ಮೂಲಕ ಸ್ವಾಮೀಜಿಯ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ.
ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ ಜೈಲಿನಲ್ಲಿರುವ ಸ್ವಾಮೀಜಿ ಜಾಮೀನು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಅ.31 ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು