ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಜೈಲಿನ ಮೆನುವಿನಂತೆ ಶುಕ್ರವಾರ ರಾತ್ರಿ ದರ್ಶನ್ ಚಿಕನ್ ಸಾಂಬಾರ್, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ.
ಜೈಲಿನ ಅನ್ನ-ಸಾಂಬಾರ್ ತಿಂದು ಬಸವಳಿದಿದ್ದ ದರ್ಶನ್ ಅವರಿಗೆ ಚಿಕನ್ ಸಾಂಬಾರ್ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್ ಸಾಂಬಾರ್ ಸೇವಿಸಿದ ದರ್ಶನ್ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಹೀಗಾಗಿ ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ.