ಬೆಂಗಳೂರು:- ನೀರಿನ ಬಿಕ್ಕಟ್ಟಿಗೆ ಬೇಸತ್ತ ಐಟಿ ಉದ್ಯೋಗಿಗಳು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದಾರೆ.
ಬೆಂಗಳೂರಿನ ನೀರಿನ ಸಮಸ್ಯೆಯಿಂದ ಬೇಸತ್ತಿರುವ ಅನೇಕ ಐಟಿ ಉದ್ಯೋಗಿಗಳು ಊರುಗಳಿಗೆ ತೆರಳುತ್ತಿದ್ದರೆ, ಇನ್ನು ಕೆಲವರು ಮೈಸೂರು, ಮುಂಬೈ ಎಂದು ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ನೋ ವರ್ಕ್ ಫ್ರಂ ಹೋಮ್ ಪಾಲಿಸಿ ಅಳವಡಿಸಿಕೊಂಡಿರುವ ಕಂಪನಿಗಳ ಉದ್ಯೋಗಿಗಳ ಪಾಡು ಹೇಳತೀರದಾಗಿದೆ. ಈ ಮಧ್ಯೆ, ನಗರದಲ್ಲಿ ನೀರಿನ ಸಮಸ್ಯೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೇಳುವಷ್ಟೇನೂ ನೀರಿನ ಕೊರತೆ ಇಲ್ಲ, ಬಿಜೆಪಿಯವರು ಕೊರತೆಯನ್ನು ಸೃಷ್ಟಿಸಿದ್ದಾರೆ. ತಮಿಳುನಾಡಿಗೆ ಕಾನೂನಾತ್ಮಕವಾಗಿ ಕೇಳಿದ್ದನ್ನು ನಾವು ನೀಡುತ್ತಿದ್ದೇವೆ. ಬೆಂಗಳೂರಿಗೆ ನೀರು ಕೊಡುವುದು ನಮ್ಮ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.
ನಗರದಲ್ಲಿ ಸುಮಾರು 7 ಸಾವಿರ ಬೋರ್ವೆಲ್ಗಳ ಕೊರತೆಯಿದ್ದು, ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ