ಟೋಕಿಯಾ: ಜಪಾನ್ ಪ್ರಧಾನಿ ಫೆಮಿಯೊ ಕಿಶಿದಾ ಉಕ್ರೇನ್ಗೆ ಭೇಟಿ ನೀಡಿದ್ದು, ಕೀವ್ನಲ್ಲಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಜಿ-7 ನಾಯಕರು ಜತೆ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ರಷ್ಯಾ ವಿರುದ್ಧದ ಹೋರಾಟದಲ್ಲಿ ಉಕ್ರೇನ್ ಜನರು ತೋರಿದ ಧೈರ್ಯ ಮತ್ತು ಪರಿಶ್ರಮಕ್ಕೆ ಗೌರವ ಸಲ್ಲಿಸಿರುವ ಕಿಶಿದಾ, ಉಕ್ರೇನ್ಗೆ ಸಕಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಭರವಸೆ ನೀಡಿರುವುದಾಗಿ ಎಂದು ಜಪಾನ್ನ ವಿದೇಶಾಂಗ ಸಚಿವಾಲಯದ ಮಾಹಿತಿ ನೀಡಿದೆ.
ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಕಿಶಿದಾ, ಮೋದಿ ಅವರನ್ನು ಭೇಟಿ ಮಾಡಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶವನ್ನು ಮುಕ್ತ ಹಾಗೂ ಸ್ವತಂತ್ರವಾಗಿರಿಸುವ ಹೊಸ ಯೋಜನೆಯೊಂದನ್ನು ಪ್ರಕಟಿಸಿದ್ದರು. ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶದಲ್ಲಿರುವ ದೇಶಗಳ ಆರ್ಥಿಕತೆಗೆ (ಕಾರ್ಖಾನೆ ಸ್ಥಾಪನೆಯಿಂದ ವಿಪತ್ತು ತಡೆವರೆಗೆ) ಸಹಾಯ ಮಾಡುವ ಉದ್ದೇಶದಿಂದ 75 ಬಿಲಿಯನ್ ಡಾಲರ್ನಷ್ಟು (ಅಂದಾಜು 6.15 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ತಿಳಿಸಿದ್ದ ಕಿಶಿದಾ, ನಮ್ಮ ಗುರಿಯನ್ನು ತಲುಪುವಲ್ಲಿ ಭಾರತವು ಮುಖ್ಯವಾದ ಪಾತ್ರವಹಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ಅವರು, ‘ಭಾರತ-ಜಪಾನ್ನ ಪಾಲುದಾರಿಕೆಯು ಎರಡೂ ದೇಶಗಳಿಗೆ ಮಾತ್ರ ಮುಖ್ಯವಾದುದಲ್ಲ. ಬದಲಿಗೆ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ನೆಲೆಸುವಲ್ಲಿಯೂ ನಮ್ಮ ಸಂಬಂಧ ಮುಖ್ಯ ಪಾತ್ರವಹಿಸುತ್ತದೆ’ ಎಂದಿದ್ದರು.