ಬೆಂಗಳೂರು: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಲೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರ ಭಾಗವಾಗಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕೆವಿ ಅರಮನೆ ಶಂಕರ್ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಗಿರಿನಗರದ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯ ಜಾಥಾದೊಂದಿಗೆ ಚೆನ್ನಮ್ಮನಕೆರೆ ಅಚ್ಚುಕಟ್ಟಿನಲ್ಲಿರುವ ಬಿಬಿಎಂಪಿ ಆಫೀಸ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಟಿ. ಎ. ಶರವಣ ಅವರು ಭಾಗಿಯಾಗಿದ್ದರು. ಇನ್ನೂ ಕರ್ನಾಟಕ 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ.