ಚಿತ್ರದುರ್ಗ: 2023 ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಅಧಿಕಾರದ ಗದ್ದುಗೆ ಏರಲು ನಾನರೀತಿ ಕಸರತ್ತು ನಡೆಸುತ್ತಿದ್ದಾರೆ. ಅದರ ಭಾಗವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಅವರು ಭರ್ಜರಿಯಾಗಿ ಪ್ರಚಾರ ಆರಂಭಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ವಾರ್ಡ್ ನಂಬರ್ 9 ಮತ್ತು 10ರಲ್ಲಿ ಭರ್ಜರಿಯಾಗಿ ಪ್ರಚಾರ ಕೈಗೊಂಡರು. ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ.ಟಿ.ಎ.ಶರವಣ ಅವರು ನಗರಕ್ಕೆ ಹೋಗಿ ರಘು ಆಚಾರ್ ಪರವಾಗಿ ಭರ್ಜರಿಯಾಗಿ ಪ್ರಚಾರಕ್ಕೆ ಕೈಜೊಡಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ.ಟಿ.ಎ.ಶರವಣ ಅವರ ನೇತೃತ್ವದಲ್ಲಿಲ್ಲಿ ಪ್ರಚಾರಕ್ಕೆ ನೂರಾರು ಕಾರ್ಯಕರ್ತರು, ಸಾವಿರಾರು ಅಭಿಮಾನಿಗಳು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ನಂತರ ಮನೆ ಮನೆಗೆ ಹೋಗಿ ಜೆಡಿಎಸ್ ಗೆ ಮತ ಹಾಕುವಂತೆ ಮನವಿ ಮಾಡಿದರು.
SHARE.