ಬೆಂಗಳೂರು: ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಅಖಾಡದಿಂದ ಹಿಂದೆ ಸರಿದಿದ್ದಾರೆ. ಹಾಗಿದ್ರೆ ಮಂಡ್ಯ ಕ್ಷೇತ್ರದಿಂದ ಮೈತ್ರಿಯ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎದ್ದಿದೆ. ಅಭ್ಯರ್ಥಿ ಆಯ್ಕೆ ಮತ್ತೆ ದಳಪತಿಗಳಿಗೆ ಗೊಂದಲವಾಗಿದೆ.
ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರು ಮಂಡ್ಯ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸುತ್ತಾರಾ? ಮಂಡ್ಯ ಜೆಡಿಎಸ್ ನಾಯಕರ ನಡೆ ಈ ರೋಚಕ ಸುಳಿವು ನೀಡಿದ್ದಾರೆ.
ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಬಹಿರಂಗವಾಗಿ ಇಂತಹದೊಂದು ಹೇಳಿಕೆ ನೀಡಿದ್ದಾರೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕಾರ್ಯಕ್ರಮದಲ್ಲಿ ಮಾತನಾಡಿದ ಪುಟ್ಟರಾಜು ಅವರು ಆರೋಗ್ಯ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅಪಾರ ಸಾಧನೆ ಮಾಡಿದ್ದಾರೆ. ಅವರು ಮೂಲತಃ ಹಾಸನ ಜಿಲ್ಲೆಯವರಾದ್ರೂ ಅವರ ರೈಸ್ಮಿಲ್, ತೋಟ, ಭೂಮಿ ಇರೋದೆಲ್ಲಾ ಮಂಡ್ಯ ಜಿಲ್ಲೆಯಲ್ಲಿ. ಅವರು ಓದಿದ್ದು ಅವರ ಸಂಬಂಧಿಕರು ಇರೋದು ಕೂಡ ಮಂಡ್ಯ ಜಿಲ್ಲೆಯಲ್ಲಿ. ಹೀಗಾಗಿ ಮಂಜುನಾಥ್ ಅವರೇ ಮಂಡ್ಯದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಲಿ ಎಂದಿದ್ದಾರೆ.