ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ರಂಗೇರುತ್ತಿದೆ. ಮುಂಬರುವ ಚುನಾವಣೆಗಾಗಿ ಎಲ್ಲಾ ರಾಜಕೀಯ ಪಕ್ಷದವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಮುನೇಗೌಡ ಅವರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಅದ್ದಿಗಾನಹಳ್ಳಿಯಲ್ಲಿರುವ ಪಟಾಲಮ್ಮ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಈ ವೇಳೆ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ನಾಯಕರಾದ ಟಿ.ಎ.ಶರವಣ ಕೂಡ ಸಾಥ್ ನೀಡಿದರು. ಇವರ ಜೊತೆ JDS ಪಕ್ಷದ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.