ಬೆಂಗಳೂರು: ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳನ್ನು ಜಪ್ತಿ ಮಾಡುವಲ್ಲಿ ಹಲಸೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಮೂವರನ್ನು ಅರೆಸ್ಟ್ ಮಾಡಲಾಗಿದ್ದು, ಪಂಕಜ್ ಗೌಡ, ಭಗವಾನ್ ಸಿಂಗ್, ವಡಿವೇಲು ಬಂಧಿತರು ಎಂದು ಹೇಳಲಾಗಿದೆ. ಚುನಾವಣಾಧಿಕಾರಿ ಮುನಿಯ ನಾಯಕ ದೂರಿನ ಮೇರೆಗೆ ದಾಳಿ ನಡೆಸಿ ಚಿನ್ನದ ಲೇಪನದ ಆಭರಣಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಸಿ.ವಿ.ರಾಮನ್ನಗರ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಗೋಲ್ಡ್ ಕೋಟೆಡ್ ಸರ, ಉಂಗುರ, ಕಿವಿಯೋಲೆ, ಬ್ರೇಸ್ ಲೇಟ್, ಬಳೆಗಳು ಸೇರಿದಂತೆ 8 ಕೆಜಿಗೂ ಅಧಿಕ ತೂಕದ ಚಿನ್ನದ ಲೇಪನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಎಸಿಪಿbe ರಾಮಚಂದ್ರ, ಇನ್ಸ್ಪೆಕ್ಟರ್ ಹರೀಶ್ ಬಾಬು, ಸಬ್ ಇನ್ಸ್ಪೆಕ್ಟರ್ ಮಧು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.