ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಅವರು ಐಸಿಸಿ ಟೆಸ್ಟ್ ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.
ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯ ವೇಳೆ ಜೋ ರೂಟ್ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದರು.
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 12 ಸಾವಿರ ರನ್ಗಳಿಸಿದ ವಿಶ್ವದ ಏಳನೇ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಅವರು ಈ ವೇಳೆ ಬರೆದಿದ್ದರು. ಮೂರನೇ ಟೆಸ್ಟ್ ಪಂದ್ಯದಲ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದ 32ನೇ ಶತಕವನ್ನು ಪೂರ್ಣಗೊಳಿಸಿದ್ದ ಜೋ ರೂಟ್, ಸ್ಟೀವನ್ ಸ್ಮಿತ್, ಕೇನ್ ವಿಲಿಯಮ್ಸನ್ ಹಾಗೂ ಸ್ಟೀವಾ ಅವರ ಶತಕಗಳನ್ನು ಸರಿದೂಗಿಸಿದ್ದರು.
ಪಾಕಿಸ್ತಾನ ನಾಯಕ ಬಾಬರ್ ಆಝಮ್ ಮೂರನೇ ಸ್ಥಾನ, ನ್ಯೂಜಿಲೆಂಡ್ನ ಡ್ಯಾರಿಲ್ ಮಿಚೆಲ್ ನಾಲ್ಕನೇ ಸ್ಥಾನ, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ 5ನೇ ಸ್ಥಾನ ಹಾಗೂ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನಕ್ಕೇರಿದ್ದಾರೆ. ಟೆಸ್ಟ್ ಆಲ್ರೌಂಡರ್ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ ಅಗ್ರ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಇನ್ನು ಇಂಗ್ಲೆಡ್ನ ಬೆನ್ ಸ್ಟೋಕ್ಸ್ (6ನೇ ಸ್ಥಾನ) ಹಾಗೂ ಕ್ರಿಸ್ ವೋಕ್ಸ್ (9ನೇ ಸ್ಥಾನ) ಆಲ್ರೌಂಡರ್ಗಳ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ.