ಬೆಂಗಳೂರು: ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲಾಸೌರಭ 2023 ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಲಾಸೌರಭ ಕಾರ್ಯಕ್ರಮಕ್ಕೂ ಮುಂದಿನ ದಿನ ಆಯೋಜಿಸಿದ್ದ ವಿವಿಧ ಕ್ರೀಡೆಗಳಲ್ಲಿ ಭಾಗಿಯಾಗಿ ವಿಜಯ ಶಾಲಿಗಳಾದವರಿಗೆ ಟ್ರೋಫಿ ನೀಡಲಾಯ್ತು.
ಇನ್ನೂ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಟಿ ರಾಗಿಣಿ ಪ್ರಜ್ವಲ್ ಆಗಮಿಸಿ ವಿದ್ಯಾರ್ಥಿಗಳನ್ನ ಹುರಿದುಂಬಿಸಿದ್ದಲ್ಲದೇ ಕೆಲವೊಂದು ಹಾಡುಗಳಿಗೆ ನೃತ್ತ ತರಬೇತಿ ಮಾಡಿ ವಿದ್ಯಾರ್ಥಿಗಳಿಗೆ ಅಟ್ರ್ಯಾಕ್ಟ್ ಆದ್ರು.
ಇನ್ನು ಕಾರ್ಯಕ್ರಮದಲ್ಲಿ ನೃತ್ಯ, ಸಂಗೀತ, ಫ್ಯಾಷನ್ ಶೋ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡಿದ್ದ ಕಾರಣ ವಿದ್ಯಾರ್ಥಿಗಳು ಸಖತ್ ಎಂಜಾಯ್ ಮಾಡಿದ್ದಾರೆ.