ಅದಾ ಶರ್ಮಾ ಮುಖ್ಯ ಭೂಮಿಕೆಯ ‘ದಿ ಕೇರಳ ಸ್ಟೋರಿ ’ ಸಿನಿಮಾ ಸಾಕಷ್ಟು ಕಲೆಕ್ಷನ್ ಮಾಡಿದೆ. ಆದರೂ ಈ ಸಿನಿಮಾ ಕೆಲವರಿಗೆ ಇಷ್ಟ ಆಗಿಲ್ಲ. ಇದೀಗ ಸಿನಿಮಾದ ಕುರಿತು ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.
ಅಬುಧಾಬಿಯಲ್ಲಿ ನಡೆಯುತ್ತಿರುವ ‘ಐಫಾ ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ಭಾಗಿ ಆಗಿದ್ದು, ಈ ವೇಳೆ ಅವರಿಗೆ ‘ದಿ ಕೇರಳ ಸ್ಟೋರಿ ’ ಸಿನಿಮಾ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಮಲ್, ‘ನಾನು ಆಗಲೇ ಹೇಳಿದ್ದೇನೆ. ಇದು ಪ್ರೊಪೊಗಾಂಡ ಸಿನಿಮಾ. ನಾನು ಅದರ ವಿರುದ್ಧವಾಗಿದ್ದೇನೆ. ಸಿನಿಮಾ ಶೀರ್ಷಿಕೆಯ ಕೆಳಗಡೆ ‘ಸತ್ಯ ಘಟನೆ’ ಅಂತ ಬರೆದರೆ ಸಾಕಾಗುವುದಿಲ್ಲ. ಅದು ನಿಜಕ್ಕೂ ಸತ್ಯ ಘಟನೆಯೇ ಆಗಿರಬೇಕು. ಆದರೆ ಈ ಚಿತ್ರದಲ್ಲಿನ ವಿಷಯ ನಿಜವಲ್ಲ’ ಎಂದು ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.
‘ದಿ ಕೇರಳ ಸ್ಟೋರಿ’ ಸಿನಿಮಾ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಮತಾಂತರ ಮತ್ತು ಐಸಿಸ್ ಉಗ್ರ ಸಂಘಟನೆಗಳ ನಡುವೆ ಇರುವ ನಂಟನ್ನು ಈ ಸಿನಿಮಾ ತೆರೆದಿಟ್ಟಿದೆ. ಇದು ಸತ್ಯ ಘಟನೆಗಳ ಆಧಾರಿತ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ. ನಿರ್ದೇಶಕ ಸುದೀಪ್ತೋ ಸೇನ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ದೇಶದ ವಿವಿಧ ನಗರಗಳ ಸಾವಿರಾರು ಪರದೆಗಳಲ್ಲಿ ಮೇ 5ರಂದು ‘ದಿ ಕೇರಳ ಸ್ಟೋರಿ’ ತೆರೆಕಂಡಿತು. ಈವರೆಗೂ ಈ ಸಿನಿಮಾ 213 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.