ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಪುರುಷರ ಸಿಂಗಲ್ಸ್ ಎಸ್ಎಲ್ 4 ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ.
ಕನ್ನಡಿಗ ಸುಹಾಸ್ಗೆ ಪ್ಯಾರಾಲಿಂಪಿಕ್ಸ್ನಲ್ಲಿ ಇದು ಸತತ ಎರಡನೇ ಪದಕವಾಗಿದೆ. ಈ ಹಿಂದೆ 2020ರ ಪ್ಯಾರಾಲಿಂಪಿಕ್ಸ್ನಲ್ಲೂ ಸುಹಾಸ್ ಯತಿರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಏಕಪಕ್ಷೀಯವಾಗಿ ನಡೆದ ಈ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ನ ಲ್ಯೂಕಾಸ್ ಮಜೂರ್ ವಿರುದ್ಧ 0-2 (9-21, 13-21) ರಿಂದ ಸೋತು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು. ಇದರೊಂದಿಗೆ ವಿಶ್ವ ನಂ.1 ಶ್ರೇಯಾಂಕದ ಸುಹಾಸ್ ಯತಿರಾಜ್ ಸತತ ಎರಡನೇ ಪ್ಯಾರಾಲಿಂಪಿಕ್ಸ್ನಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
ಕಳೆದ ಬಾರಿ ಅಂದರೆ 2020 ರ ಟೋಕಿಯೋ ಒಲಿಂಪಿಕ್ಸ್ನಲ್ಲೂ ಸುಹಾಸ್ ಬೆಳ್ಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ಯಾರಾಲಿಂಪಿಕ್ಸ್ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.