ಬೆಂಗಳೂರು: ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ.
ಬುಧವಾರ ಲ್ಯಾವೆಲ್ಲೆ ರಸ್ತೆಯಲ್ಲಿ ಇಂಗ್ಲಿಷ್ ಬೋರ್ಡ್ ಒಡೆದು ಹಾಕಿದ ಹಿನ್ನೆಲೆ ಕಬ್ಬನ್ ಪಾರ್ಕ್ ಪೊಲೀಸರು ಅರೆಸ್ಟ್ ಮಾಡಿದ್ದರು. ಬುಧವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ 15 ಮಂದಿಗೆ ಎಂಟನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು

ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಪರಪ್ಪನ ಅಗ್ರಹಾರದಿಂದ ಕರವೇ ಕಾರ್ಯಕರ್ತರು ಬಿಡುಗಡೆಯಾಗಿದ್ದಾರೆ. ಕರವೇ ಕಾರ್ಯಕರ್ತರು ಜೈಲಿನಿಂದ ಬಿಡುಗಡೆಯಾಗುವ ಮೊದಲು ಜೈಲು ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಬ್ಯಾರಿಕೇಡ್ ಹಾಕಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಪ್ಪನ ಅಗ್ರಹಾರ ಪೊಲೀಸರು ಭದ್ರತೆ ಕೈಗೊಂಡಿದ್ದರು.
ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಇನ್ನೂ ಕೇಂದ್ರ ಕಾರಾಗೃಹದಲ್ಲೇ ಇದ್ದು ಅವರಿಗೆ ಜಾಮೀನು ದೊರೆತಿಲ್ಲ.