ಬೆಂಗಳೂರು: ಕನ್ನಡಿಗರ ಉದ್ಯೋಗಕ್ಕಾಗಿ ಆಗ್ರಹಿಸಿ ನಾಳೆ ರಾಜ್ಯಾದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಯಿಂದ 4 ಗಂಟೆವರೆಗೂ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರೊಟೆಸ್ಟ್ ನಡೆಯಲಿದ್ದು,
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗೆ ಆಯೋಜನೆ ಮಾಡಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿಗಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಚಳುವಳಿ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.
ಪ್ರಮುಖ ಬೇಡಿಕೆಗಳು
- ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ಬಲಿಷ್ಠ ಕಾನೂನೂ ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡ್ಬೇಕು
- ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆ 100%ಕನ್ನಡಿಗರಿಗೆ ಮೀಸಲಿಡಬೇಕು
- ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ 80%ಕನ್ನಡಿಗರಿಗೆ ಮೀಸಲಿಡಬೇಕು
- ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು
- ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದ್ರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು
- ನಿಯಮ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡ್ಬೇಕು
- ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನ ವಾಪಾಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕ್ಬೇಕು
- ರಾಜ್ಯ ಸರ್ಕಾರಿ ಸಂಸ್ಥೆ ಮತ್ತುಸಾರ್ವಜನಿಕ ವಲಯದಲ್ಲಿ 100%ಕನ್ನಡಿಗರಿಗೆ ಮೀಸಲಾತಿ
- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ 100% ಕನ್ನಡಿಗರಿಗೆ ಮೀಸಲಾತಿ ನೀಡಬೇಕು
- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ,ಡಿ ಹೊರತಾದ ಉಳಿದ ಉದ್ಯೋಗದಲ್ಲಿ 90%ಮೀಸಲಾತಿ ನೀಡಬೇಕು
- ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಈ ಅಂಶವನ್ನ ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು
- ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡ್ಬೇಕು