ಬೆಂಗಳೂರು: ಕರವೇ ಅಧ್ಯಕ್ಷ ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಮುಂದೂಡಿದೆ.
2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ (KaRaVe) ಅಧ್ಯಕ್ಷ ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಮುಂದೂಡಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ಆರೋಪಿಗೆ 2017 ರಲ್ಲಿ ಜಾಮೀನು ಸಿಕ್ಕಿದೆ. ಜಾಮೀನು ಪಡೆದ ಬಳಿಕ ರೆಗ್ಯುಲರ್ ಡೇಟ್ಗೆ ನ್ಯಾಯಾಲಯಕ್ಕೆ ಹಾಜರಾಗಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ನ್ಯಾಯಾಲಯದ ಅರಿವಿಲ್ಲವೇ? ಈಗ ಗೊತ್ತಾಗಿಲ್ಲ, ಅರಿವಿರಲಿಲ್ಲ ಅಂತ ಹೇಳುವುದು ಸರಿಯಲ್ಲ. ಹೀಗಾಗಿ ಜಾಮೀನು ನಿರಾಕರಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪ ವ್ಯಕ್ತಪಡಿಸಿದೆ.