ಹುಬ್ಬಳ್ಳಿ, ಡಿಸೆಂಬರ್27 : ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ನಾಯಕರ ವಿರುದ್ಧ ಬುಸುಗುಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಪಕ್ಷದಲ್ಲಿ ಹುಟ್ಟಿಕೊಂಡ ಅಸಮಾಧಾನ ಹಾಗೂ ಭಿನ್ನಮತ ಮತ್ತೆ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆದ ಸಭೆಗೆ ಜಗದೀಶ್ ಶೆಟ್ಟರ್ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ. ಹೌದು, ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಈ ಹಿಂದೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಪ್ತ ಹಾಗೂ ಮಾಜಿ ಸಚಿವ ಮುನೇನಕೊಪ್ಪ ಸ್ವಪಕ್ಷ ಬಿಜೆಪಿ ವಿರುದ್ಧ ಕೆಂಡಕಾರಿದ್ದರು. ಅಷ್ಟೇ ಅಲ್ಲ ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಬಿಜೆಪಿ ವಿರುದ್ಧ ನೇರವಾಗಿ ಅಸಮಾಧಾನ ಹೊರಹಾಕಿದ್ದರು. ಇದೀಗ ಈ ಮುನಿಸನ್ನ ಶಮನಗೊಳಿಸಿ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವ ಉದ್ದೇಶದಿಂದಾಗಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಕೋರ್ ಕಮಿಟಿ ಸಭೆ ಕರೆದಿದ್ದು, ಸಭೆಗೆ ಗೈರಾಗುವ ಮೂಲಕ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ದು, ಲೋಕಸಭಾ ಚುನಾವಣೆಗೆ ತಯಾರಿ ಪಕ್ಷದ ಆಂತರಿಕ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಲೋಕಸಭಾ ಚುನಾವಣೆಗಾಗಿ ಧಾರವಾಡ ಜಿಲ್ಲೆಯ ಬಿಜೆಪಿ ಕಚೇರಿ ಉದ್ಘಾಟನೆಗೆ ತಯಾರಿ ವಿಚಾರವಾಗಿ ಚರ್ಚಿಸಿದ್ದಾರೆ. ಇನ್ನೂ ಪಕ್ಷದ ವಿರುದ್ಧವಾಗಿ ಮೇಲಿಂದ ಮೇಲೆ ಡ್ಯಾಮೇಜ್ ರೀತಿಯಲ್ಲಿ ಪಕ್ಷದ ಕೆಲವರು ಹೇಳಿಕೆ ನೀಡುತ್ತಿರುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಇನ್ನೂ ಮುಂದಿನ ಹುಬ್ಬಳ್ಳಿ- ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರೀ ಪ್ರಹ್ಲಾದ್ ಜೋಶಿ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲುವಿನ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇ ಸೇರಿದ್ದು ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಕೋಟೆ ಒಡೆದ ಮನೆಯಂತಾಗಿದೆ. ಲೋಕಸಭೆ ಚುನಾವಣೆಗೆ ಶೆಟ್ಟರ್ ದಾಳ ಉರುಳಿಸಿದ್ದು, ಬಿಜೆಪಿಯಲ್ಲಿ ಇನ್ನೂ ಮುನಿಸು ಮರೆಯಾಗಿಲ್ಲ. ಮಂಗಳವಾರ ಜೋಶಿ ಕರೆದ ಸಭೆಗೆ ಟ್ಟರ್ ಆಪ್ತ ಹಾಗೂ ಮಾಜಿ ಸಚಿವ ಮುನೇನಕೊಪ್ಪ ಹಾಗೂ ಪ್ರದೀಪ್ ಶೆಟ್ಟರ್ ಗೈರಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.