ಬೆಂಗಳೂರು:- ವಯನಾಡು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಮೂಲಕ ಕೇರಳಕ್ಕೆ ಸಿದ್ದರಾಮಯ್ಯ ಅಭಯ ಹಸ್ತ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ, ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಕ್ಷಣಾ ಕಾರ್ಯಾಚರಣೆಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈಜೋಡಿಸಲಿದೆ. ರಕ್ಷಣಾ ತಂಡ, ಅಗತ್ಯ ಸಾಮಗ್ರಿ ಕಳುಹಿಸಲಾಗುತ್ತಿದೆ ಎಂದು ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದುರಂತದಲ್ಲಿ ಸಿಲುಕಿಕೊಂಡವರ ರಕ್ಷಣೆ ಸಂಬಂಧ ಸಚಿವ ಸಂತೋಷ್ ಲಾಡ್ ಅಧಿಕಾರಿಗಳ ಜೊತೆ ವಾಯನಾಡಿಗೆ ತೆರಳುತ್ತಿದ್ದು, ಮಧ್ಯಾಹ್ನದ ವೇಳೆಗೆ ವಾಯನಾಡ್ಗೆ ತಲುಪಲಿದ್ದಾರೆ. ರೈಲು ದುರಂತದ ವೇಳೆ ಕೂಡ ಕನ್ನಡಿಗರ ರಕ್ಷಣೆಗಾಗಿ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದರು.
ಬೆಂಗಳೂರಿನಲ್ಲಿರುವ ಎನ್ಡಿಆರ್ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ಈಗಾಗಲೆ ವಯನಾಡಿನಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ