ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜನಸ್ನೇಹಿಯಾಗಿ ಕರ್ತವ್ಯನಿರ್ವಹಿಸಿರುವುದಕ್ಕೆ ಜನರಿಂದ ಅಭಿನಂದನೆ ವ್ಯಕ್ತವಾಗಿದೆ. ಇದನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು. ಇನ್ನೂ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಕ್ರಿಯಾ ಯೋಜನೆ ರೂಪಿಸಬೇಕಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ಬೆಳಗ್ಗೆ ಸದಾಶಿವನಗರದ ಗೃಹ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣಗುಪ್ತ, ಸತೀಶ್, ಎಂಎನ್ ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗದ ಡಿಸಿಪಿಗಳ ಜತೆ ಸಭೆ ನಡೆಸಿದರು. ಈ ವೇಳೆ, ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸುವುದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.