ಜಪ್ತಿಯಾದ ಜಯಲಲಿತಾ (Jayalalitha) ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕರ್ನಾಟಕ ಹೈಕೋರ್ಟ್ (Karnataka High Court) ದಿನಾಂಕ ನಿಗದಿ ಮಾಡಿದೆ.
ತಮಿಳುನಾಡು (Tamil Nadu) ಮಾಜಿ ಸಿಎಂ ದಿ. ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ಮಾರ್ಚ್ 6 ಮತ್ತು 7 ರಂದು ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ನ್ಯಾ. ಮೋಹನ್ ಸೂಚಿಸಿದ್ದಾರೆ.
ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕವಾಗಬೇಕು. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ಹೈಕೋರ್ಟ್ ಸೂಚಿಸಿದೆ.