ಬೆಂಗಳೂರು:- ಕರ್ನಾಟಕ ನಕ್ಸಲ್ ಮುಕ್ತ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ತಮ್ಮ ಮುಂದೆ ಶರಣಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, 20 ವರ್ಷಗಳು ಹೆಚ್ಚು ಕಾಲ ನಕ್ಸಲ್ ಚಳುವಳಿ ದಾರಿಯಲ್ಲಿ ನಡೆದರು. ಕಾಡಿನಲ್ಲಿ ಇದ್ದು ಚಳುವಳಿ ಮಾಡಿದ 6 ಜನ ನಕ್ಸಲರು ಇಂದು ಶರಣಾಗತಿ ಆಗಿದ್ದಾರೆ.
ಸರ್ಕಾರ ಅವರಿಗೆ ಆಹ್ವಾನ ನೀಡಿದ್ದರಿಂದ 6 ಜನ ಶರಣಾಗತಿ ಆಗಿದ್ದಾರೆ. ಹೋರಾಟ ಹಾದಿ ಬಿಟ್ಟು ಪರಿವರ್ತನೆಗೊಂಡು ಮುಖ್ಯವಾಹಿನಿಗೆ ಬರಲು ತೀರ್ಮಾನ ಮಾಡಿ ನನ್ನ ಮುಂದೆ ಶರಣಾಗತಿ ಆಗಿದ್ದಾರೆ. ಡಿಸಿಎಂ ಸೇರಿ ಸಚಿವರ ಮುಂದೆ ಶರಣಾಗತಿ ಆಗಿದ್ದಾರೆಂದು ಅಧಿಕೃತವಾಗಿ ಸಿಎಂ ತಿಳಿಸಿದರು
ನನ್ನ ಪ್ರಕಾರ ಕರ್ನಾಟಕ ನಕ್ಸಲ್ ಮುಕ್ತ ಆಗಿದೆ. ಶರಣಾದ ನಕ್ಸಲರ ಬೇಡಿಕೆ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನ ಮಾತಿಳಿಸಿದರುರು
ಕೆಲವು ದಿನಗಳ ಹಿಂದೆ ನಾಗರಿಕ ಸಮಿತಿ, ಪುನರ್ ವಸತಿ ಸಮಿತಿ ಅವರು ಭೇಟಿ ಆಗಿದ್ದರು. ಅವರ ಜೊತೆ ಮಾತುಕತೆ ನಡೆಸಿದರು. ಅವರು, 6 ನಕ್ಸಲರು ಶರಣಾಗತಿ ಆಗಲು ತೀರ್ಮಾನ ಮಾಡಿದ್ದಾರೆ. ಸರ್ಕಾರದ ವತಿಯಿಂದ ಆಹ್ವಾನ ಮಾಡಲು ಹೇಳಿದರು. ಅದಕ್ಕೆ ಪತ್ರಿಕಾ ಹೇಳಿಕೆ ಕೊಟ್ಟೆ. ಕಾನೂನು ರೀತಿ ಯಾವ ಸಹಾಯ ಮಾಡಲು ಸಾಧ್ಯವೋ ಮಾಡ್ತೀನಿ ಅಂತ ಹೇಳಿದ್ದೆ. ಕೆಟಗರಿ ಆಧಾರದಲ್ಲಿ ಅವರಿಗೆ ಪರಿಹಾರ ಕೊಡ್ತೀವಿ. ಕಾಡಿನಿಂದ ನಾಡಿಗೆ ಬರಲಿಕ್ಕೆ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತೆ ಅಂತ ಹೇಳಿದ್ವಿ. ಕಾನೂನು ರೀತಿ ಸಹಕಾರ ಕೊಡೋದಾಗಿ ಹೇಳಿದ್ವಿ. ಶಸ್ತ್ರಾಸ್ತ್ರಗಳ ಮೂಲಕ, ಅನ್ಯಾಯ, ದೌರ್ಜನ್ಯ, ಶೋಷಣೆ ವಿರುದ್ಧ ಹೋರಾಟ ಮಾಡುತ್ತಿದ್ದರು. ಹೋರಾಟದ ಮೂಲಕ ನ್ಯಾಯ ಸಿಗೊಲ್ಲ ಅಂತ ಅವರಿಗೆ ಅರಿವಾಗಿದೆ. ಸಂವಿಧಾನದ ಪ್ರಕಾರ ಹೋರಾಟಕ್ಕೆ ಅವಕಾಶ ಇದೆ ಅಂತ ಮುಖ್ಯವಾಹಿನಿಗೆ ಬರೋಕೆ ಒಪ್ಪಿದ್ದಾರೆ. ಒಟ್ಟಾರೆಯಾಗಿ ನಮ್ಮ ಸರ್ಕಾರ ಕರ್ನಾಟಕವನ್ನ ನಕ್ಸಲ್ ಮುಕ್ತವಾಗಿ ಮಾಡೋದು ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ನಕ್ಸಲರ ಶರಣಾಗತಿಗೆ ಪ್ರಯತ್ನ ಮಾಡಿದ ಎಲ್ಲಾ ಸಂಘಟನೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಎನ್ಎಫ್ನಲ್ಲಿ ಕೆಲಸ ಮಾಡಿರೋರಿಗೂ ಧನ್ಯವಾದ ಹೇಳ್ತೀನಿ. ನಿಂಬಾಳ್ಕರ್ ಅವರಿಗೂ ಧನ್ಯವಾದ ಹೇಳ್ತೀನಿ ಎಂದರು.