ಬೆಂಗಳೂರು:- ರಾಜ್ಯದ 25ಕ್ಕೂ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಚಾಮರಾಜನಗರದಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ