ಬೆಂಗಳೂರು:- ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದ ಕಡೆ ಏಪ್ರಿಲ್ 13ರಿಂದ ಮಳೆ ಶುರುವಾಗಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಏಪ್ರಿಲ್ 13ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.
ಮುಂದಿನ 4 ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ. ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್ಎಎಲ್ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.