ಬೆಂಗಳೂರು:- ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದ್ದು, ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬುಧವಾರ ಮಧ್ಯಾಹ್ನ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲುವಿನಲ್ಲಿ ಉತ್ತಮ ಮಳೆಯಾಗಿದೆ. ಅದಾದ ಬಳಿಕ ಕಾಕೋಟು, ಪರಂಬು ಪ್ರದೇಶಗಳಲ್ಲಿ ಕೂಡ ಸಾಧಾರಣ ಮಳೆ ಸುರಿದಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಬಾಗಲಕೋಟೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ