ಕೊಪ್ಪಳ: ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಸರ್ಕಾರ ತುಷ್ಟೀಕರಣ ರಾಜಕೀಯ ಮಾಡುತ್ತಿತ್ತು. ಅವರು ರಾಜ್ಯದ ಅಭಿವೃದ್ಧಿಗಿಂತ ಹೆಚ್ಚಾಗಿ ತುಷ್ಟೀಕರಣ ಮಾಡಿದ್ದಾರೆ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ (Koppal) ಗಂಗಾವತಿಯಲ್ಲಿ (Gangavathi) ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವನ್ನು ಕಿತ್ತುಹಾಕಬೇಕು.
ಇಂದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿಯ (BJP) ಡಬಲ್ ಎಂಜಿನ್ ಸರ್ಕಾರ ಇದೆ. ಇದು ಅತ್ಯಂತ ವೇಗವಾಗಿ ಕೆಲಸ ಮಾಡುತ್ತಿದೆ. ಈ ವೇಗವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು. ಕರ್ನಾಟಕ ಇಂದು ವಿಕಾಸದ ರಾಜ್ಯವಾಗುತ್ತಿದೆ. ಕರ್ನಾಟಕದ ಮಾಹಿತಿ ತಂತ್ರಜ್ಞಾನ (IT) ವಿಭಾಗವು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದರಲ್ಲಿ ಯುವಕರ ಪಾತ್ರ ಬಹಳವಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಉತ್ತರಪ್ರದೇಶದಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಗಲಾಟೆ ಬಂದ್ ಆಗಿದೆ. ಉತ್ತರಪ್ರದೇಶ ಅಭಿವೃದ್ಧಿಯಾಗುತ್ತಿದ್ದು, ಶಾಂತಿ ಹಾಗೂ ನೆಮ್ಮದಿಯಿಂದ ಇದೆ. ಇದೆಲ್ಲಾ ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಕಾಂಗ್ರೆಸ್ನ ಪೇಡ್ ಎಂಜಿನ್ ಅಲ್ಲ. ಕಾಂಗ್ರೆಸ್ ಬರೀ ಯೊಜನೆಗಳನ್ನು ರೂಪಿಸಿದೆ. ಆದರೆ ಡಬಲ್ ಎಂಜಿನ್ ಸರ್ಕಾರ ಹಾಗಲ್ಲ. ಹಲವಾರು ಯೋಜನೆಗಳನ್ನು ರೂಪಿಸಿ ಅದನ್ನು ಜಾರಿಗೆ ತಂದು ಅಭಿವೃದ್ಧಿ ಮಾಡಿದೆ. ಇದು ಡಬಲ್ ಎಂಜಿನ್ ಸರ್ಕಾರದ ಶಕ್ತಿ. ನಾವು ಯಾವುದನ್ನೂ ಹೇಳುವುದಿಲ್ಲ, ಮಾಡಿ ತೋರಿಸುತ್ತೇವೆ. ಈ ದೇಶದಲ್ಲಿ ಮೋದಿ ಇದ್ದರೆ ಅದು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.