ಬೆಂಗಳೂರು ; ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಅವೈಜ್ಞಾನಿಕ ದರ ಹೆಚ್ಚಳ ಖಂಡಿಸಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಕೈಗಾರಿಕೆಗಳ ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ ವಿಫಲ ಹಿನ್ನಲೆ ಅನಿವಾರ್ಯವಾಗಿ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಬಂಧ್ ಗೆ ಕರೆ ನೀಡಿದೆ.