ಮದ್ಯ ನೀತಿ ಹಗರಣ ಕೇಸ್ ಗೆ ಸಂಬಧಪಟ್ಟಂತೆ ಬಂಧನ ಪ್ರಶ್ನಿಸಿ ಸುಪ್ರೀಂ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.
ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು. ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಪ್ರೋಟೋಕಾಲ್ಗಳಿಗೆ ಅನುಗುಣವಾಗಿ ಈಗ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನೂ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಗುರುವಾರ ಬಂಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂಬ ಆಗ್ರಹವೂ ತೀವ್ರಗೊಂಡಿದೆ