ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.
ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ
ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬಿಬಿಎಂಪಿ. ವಸತಿ ಶಿಕ್ಷಣ ಸಂಸ್ಥೆ ಸೇರಿ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನಿಸಲಾಗಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗಿದೆ. ನೆರೆ ರಾಜ್ಯದ ಗುತ್ತಿಗೆ ಅನಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಆಸ್ಪದವಾಗಿದೆ. ತಮ್ಮ ಆಪ್ತರಾದ ಗುತ್ತಿಗೆ ಕಾಮಗಾರಿ ನೀಡಲು ಮುಂದಾಗಿದ್ದಾರೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಎಲ್ಲಾ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತೆ. ಒಂದು ವೇಳೆ ಪ್ಯಾಕೇಜ್ ಟೆಂಡರ್ ರದ್ದು ಮಾಡದೇ ಇದ್ರೆ ಹೋರಾಟ ಮಾಡಲು ಕರೆ ಕೊಡುತ್ತೇವೆ ಎಂದು ಎಚ್ಚರಿಸಿದರು.