ಬೆಂಗಳೂರು: ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅನ್ನು ಕೆಎಸ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಿಶಾಂತ್, ಶಕೀಲ್, ಶಬ್ಬೀರ್ ಬಂಧಿತ ಆರೋಪಿಗಳಾಗಿದ್ದು, ಪ್ರತಿಷ್ಟಿತ ಲೈಟ್ಸ್ ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡುತ್ತಿದ್ದ ಮೂರು ಲಕ್ಷ ಸಿಗರೇಟ್ಗಳನ್ನು ಸೀಜ್ ಮಾಡಲಾಗಿದೆ.
ಬಾಂಗ್ಲಾದೇಶ ಮೂಲಕ ನಕಲಿ ಸಿಗರೇಟ್ಸ್ ತಂದು ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಬಂಧಿತ ಆರೋಪಿ ಶಕೀಲ್ ನಕಲಿ ಸಿಗರೇಟ್ ಜಾಲದ ಕಿಂಗ್ ಪಿನ್ ಆಗಿದ್ದ. ಆರೋಪಿಗಳ ವಿರುದ್ಧ ಕುಮಾರಸ್ವಾಮಿ ಲೇಔಟ್ನಲ್ಲಿ ಪ್ರಕರಣ ದಾಖಲಿಸಲಾಗಿದೆ.