ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಭೇಟಿ ನೀಡಿದರು. ಬೆಳಗ್ಗೆ 9-30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಳಿಕ ರಸ್ತೆ ಮಾರ್ಗವಾಗಿ ವೈಯನಾಡು ತೆರಳಿದ್ದಾರೆ.