ಬೆಂಗಳೂರು ಗ್ರಾಮಾಂತರ:- ಉದ್ಯಮಿ ಮನೆಗೆ ನುಗ್ಗಿ 15 ಲಕ್ಷ ದೋಚಿ ಖದೀಮರು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಜರುಗಿದೆ.
ಲಾಲಾರಾಮ್ ಎಂಬುವವರು ದಸರಾ ಹಬ್ಬದ ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಮನೆ ಬಾಗಿಲು ಮುರಿದು 15 ಲಕ್ಷ ರೂಪಾಯಿ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ ಹಾಗೂ 70 ಸಾವಿರ ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.