ಬೆಂಗಳೂರು: ಟಿ. ನರಸೀಪುರದಲ್ಲಿ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆ ಪ್ರಕರಣವನ್ನು ವಿಧಾನ ಪರಿಷತ್ನ ಶೂನ್ಯವೇಳೆಯಲ್ಲಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾಪಿಸಿದರು.
ಉನ್ನತ ಮಟ್ಟದ ತನಿಖೆ ಹಾಗೂ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದರು. ಗೃಹ ಸಚಿವರು ಖುದ್ದು ಉತ್ತರ ನೀಡುವಂತೆ ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದರು.
ಗೃಹ ಸಚಿವರ ಸದನದಲ್ಲಿ ಇಲ್ಲದ ಕಾರಣ ಉತ್ತರ ಕೊಡಿಸುವುದಾಗಿ ಸಚಿವ ಕೆಎನ್ ರಾಜಣ್ಣ ತಿಳಿಸಿದರು. ಈ ವೇಳೆ ಸದನದಲ್ಲಿ ಗದ್ದಲವಾಯಿತು. ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಹಿಂದೆ ಯಾರ ಯಾರ ಕೈವಾಡ ಇದೆ ಅನ್ನೋದು ಬಯಲಾಗಬೇಕು. ಸಮಗ್ರ ತನಿಖೆ ಆಗಲಿ ಅಂತಾ ಸತ್ಯಶೋಧನಾ ಸಮಿತಿ ರಚಿಸಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆಯಾಗಿದೆ. ಕಳೆದ ಒಂದು ತಿಂಗಳಿನಲ್ಲಿ 10-11 ಹತ್ಯೆಗಳಾಗಿವೆ ಎಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ಆಗ್ರಹಿಸಿದ್ದಾರೆ.