ವಿಜಯಪುರ : ಯಾದಗಿರಿ ಪಿಎಸ್ಐ ಪರಶುರಾಮ್ ಸಾವಿಗೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ದಲಿತರ ಹತ್ಯೆ ಸಿದ್ದರಾಮಯ್ಯ ಸರ್ಕಾರದಲ್ಲೇ ಹೆಚ್ಚಾಗುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಅಧಿಕಾರಿ ಸಾವಿಗೆ ಶರಣಾದ. ಈಗ ಪಿಎಸೈ ಸಾವನ್ನಪ್ಪಿದ್ದಾನೆ. ಶಾಸಕರ ಭ್ರಷ್ಟಾಚಾರವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಈ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಕೊಟ್ಟರೆ ಡಿಕೆ ಶಿವಕುಮಾರ್ ಸಿಎಂ ಆಗಲು ಅನುಕೂಲವಾಗುತ್ತದೆ. ಹಾಗಾಗಿ ಇಡೀ ಸರ್ಕಾರವೇ ಅಧಿಕಾರದಿಂದ ಹಿಂದೆ ಸರಿದು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.