ಮಾರ್ಚ್ 23ರಂದು ಶನಿವಾರ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ಮಾಲೀಕ, ಬಾಲಿವುಡ್ ನಟ ಶಾರುಖ್ ಖಾನ್ ಧೂಮಪಾನ ಮಾಡಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಈಡನ್ ಗಾರ್ಡನ್ಸ್ ಆವರಣದಲ್ಲಿ ಶಾರುಖ್ ಖಾನ್ ಸ್ಮೋಕ್ ಮಾಡಿದ್ದು ಅದರ ವಿಡಿಯೋಗಳು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸ್ಟೇಡಿಯಂನಲ್ಲಿನ ವಿಐಪಿ ಬಾಕ್ಸ್ನೊಳಗೆ ಶಾರುಖ್ ಅವರು ಧೂಮಪಾನ ಮಾಡುತ್ತಿರುವುದನ್ನು ವಿಡಿಯೋ ಮತ್ತು ಫೋಟೋದಲ್ಲಿ ಕಾಣಬಹುದು. ಆದರೆ ಈ ವಿಡಿಯೋ ಎಲ್ಲಿಯದ್ದು? ಯಾವಾಗಿನದ್ದು? ಎನ್ನುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಪಂದ್ಯದ ವೇಳೆ ಅವರ ವರ್ತನೆಯನ್ನು ನೆಟ್ಟಿಗರು ಟೀಕಿಸಿದ್ದಾರೆ. ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್ಎಲ್) ಫೈನಲ್ನಲ್ಲಿ ಇಮಾದ್ ವಾಸಿಮ್ ಡ್ರೆಸ್ಸಿಂಗ್ ರೂಮ್ನಲ್ಲಿ ಸಿಗರೇಟ್ ಸೇದುವ ದೃಶ್ಯ ವೈರಲ್ ಆದಾಗಾಲೂ ಇದೇ ರೀತಿಯ ಘಟನೆ ಸಂಭವಿಸಿದೆ.
ಕೆಕೆಆರ್ ತಂಡ 150 ಕೋಟಿ ಲಾಭ ಗಳಿಸಿದ್ದು, ಇದರಲ್ಲಿ ಶಾರುಖ್ ಖಾನ್ ಶೇ 55ರಷ್ಟು ಪಾಲು ಹೊಂದಿದ್ದಾರೆ. ಈ ಮೂಲಕ ಶಾರುಖ್ ಖಾನ್ ಪ್ರತಿ ವರ್ಷ ಐಪಿಎಲ್ ಒಂದರಿಂದಲೇ 70 ರಿಂದ 80 ಕೋಟಿ ಗಳಿಸುತ್ತಾರೆ. ಐಪಿಎಲ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಶಾರುಖ್ ಖಾನ್ ರೆಡ್ ಚಿಲ್ಲಿಸ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಹೌಸ್ ಸಹ-ಮಾಲೀಕರಾಗಿದ್ದಾರೆ. ಇದೀಗ ಸ್ಮೋಕಿಂಗ್ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಸ್ಟಾರ್ ನಟನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.