ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್ಟಿಸಿ ಬಸ್ ಪಲ್ಟಿ ಹೊಡೆದ ಘಟನೆ ಕಲಬುರಗಿ ನಗರದ ಹೊರವಲಯದ ನಂದೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಘಟನೆಯಿಂದ 8 ಜನ ಪ್ರಯಾಣಿಕರಿಗೆ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಡಿಪೋಗೆ ಸೇರಿದ ಕೆಕೆಆರ್ ಟಿಸಿ ಬಸ್ ಕಲಬುರಗಿಯಿಂದ ಯಾದಗಿರಿ ಗೆ ಹೋಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಸ್ಥಳಕ್ಕೆ ಕಲಬುರಗಿ ಸಂಚಾರಿ 2 ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
