ಕೊಡಗು:- ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದ ಕಂಡಿಯಂಬಲ್ಲಿ ಮಾದಕ ವಸ್ತು ಗಾಂಜವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದ ನಿವಾಸಿ ಬಸವರಾಜು (37ವರ್ಷ)ಬಂಧಿತ ಆರೋಪಿಯಾಗಿದ್ದು 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದಲ್ಲಿರುವ ಮನೆಯ ಶೌಚಾಲಯದ ಹಿಂಭಾಗದಲ್ಲಿ ಮಣ್ಣಿನ ಅಡಿಯಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ ಶ್ವಾನ “ಕಾಪರ್ ” ಯಶಸ್ವಿಯಾಗಿದೆ.
ಶ್ವಾನ ಕಾಪರ್ ಅದರ ತರಬೇತಿದಾರರಾದ ಮನಮೋಹನ್ ಬಿ.ಪಿ, ಸೋಮವಾರಪೇಟೆ ಡಿವೈಎಸ್ಪಿ ಆರ್. ವಿ ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್ ಕೆ, ಪಿ.ಎಸ..ಐ ಮೋಹನ್ ರಾಜು, ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿನಂದಿಸಿದ್ದಾರೆ.