ಕೋಲಾರ : ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಾಚ್ಯ ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಎಂ.ಚಂದ್ರಶೇಖರ್ ರನ್ನು ಭಾರತೀಯ ಪೋಲಿಸ್ ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಜಿಲ್ಲಾ ಜೆಡಿಎಸ್ ಪಕ್ಷದಿಂದ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್ ಅವರ ವಿರುದ್ದ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಭ್ರಷ್ಟಾಚಾರ, ದುರ್ನಡತೆ ಮತ್ತು ಸೂಲಿಗೆ ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಲೋಕಾಯುಕ್ತ ವಿಶೇಷ ತನಿಖಾದಳ ಮುಖ್ಯಸ್ಥ ಎ.ಡಿ.ಜಿ.ಪಿ. ಎಂ.ಚಂದ್ರಶೇಖರ್ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅವಾಚ್ಯ ಪದದಿಂದ ನಿಂಧಿಸಿರುವ ಇವರ ವಿರುದ್ದ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರಲ್ಲದೆ,
ಅವಾಚ್ಯ ಪದದಿಂದ ನಿಂಧಿಸಿದ್ದು, ಭಾರತೀಯ ಸಾಂವಿಧಾನಿಕ ಉನ್ನತ ಹುದ್ದೆಯಲ್ಲಿರುವ ಈ ಅಧಿಕಾರಿಯು ದುರ್ನಡತೆ ಬೇಜವಾಬ್ದಾರಿತನದ ಹೇಳಿಕೆಯನ್ನು ನೀಡಿರುವ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಹೇಳಿದರು